ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ರಜನಿಕಾಂತ್
ನವದೆಹಲಿ:ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ರಜಿನಿಕಾಂತ್ ಚೆನ್ನೈನಿಂದ ನವದೆಹಲಿಗೆ ತೆರಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವುದು ‘ದೊಡ್ಡ ಸಾಧನೆ’ ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದರು. ಭಾನುವಾರ ನಡೆಯಲಿರುವ ನರೇಂದ್ರ ಮೋದಿ ಮತ್ತು ಅವರ ಹೊಸ ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ. ಚೆನ್ನೈನಿಂದ…

