ಪ್ರಧಾನಿ ಹುದ್ದೆ ಕೊಟ್ಟರೂ ನಾನು ಕಾಂಗ್ರೆಸ್‌ ಜೊತೆ ಹೋಗಲ್ಲ – ಪವನ್ ಕಲ್ಯಾಣ್

ಹೈದರಾಬಾದ್- ನರೇಂದ್ರ ಮೋದಿ ನಮ್ಮ ದೇಶಕ್ಕೆ ಏನು ಮಾಡಿದ್ದಾರೆ ಎಂಬ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ನನ್ನ ಬೆಂಬಲ ಎಂದೆಂದಿಗೂ ನರೇಂದ್ರ ಮೋದಿಗೆ. ಪ್ರಧಾನಿ ಹುದ್ದೆಯ ಆಫರ್ ಕೊಟ್ಟರೂ ನಾನು ಕಾಂಗ್ರೆಸ್‌ ಎಂದೆಂದೂ ಬೆಂಬಲ ನೀಡೋದಿಲ್ಲ ಎಂದು ಜನಸೇನಾ ನಾಯಕ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ‘ಇಂಡಿ’ ಮೈತ್ರಿಕೂಟವನ್ನು ಬೆಂಬಲಿಸಲು ನಮಗೆ ಅವರು ಬಹುದೊಡ್ಡ ಕೊಡುಗೆಯನ್ನೇ ನೀಡಬಹುದು. ಆದರೆ ನಾವು ದೇಶಕ್ಕಾಗಿ ನಾವು ಎಂದೆಂದೂ ಮೋದಿ ಅವರನ್ನೇ ಬೆಂಬಲಿಸುತ್ತೇವೆ ಎಂದು ಪವನ್ ಕಲ್ಯಾಣ್…

Read More

ಜೂ.8 ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ : ಇಲ್ಲಿದೆ ಜೂನ್‌ 8ರ ವಿಶೇಷತೆ..!

ನವದೆಹಲಿ. ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಅವರು ಜೂನ್ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಜೂನ್ 8ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 8 ರಂದು ಪ್ರಮಾಣವಚನ ಸ್ವೀಕರಿಸುತ್ತಿರುವುದು ತುಂಬಾ ವಿಶೇಷ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ 8 ಸಂಖ್ಯೆ ತುಂಬಾ ಪ್ರಾಮುಖ್ಯತೆ ಇದೆ. ಸಾಮಾನ್ಯವಾಗಿ ಅನೇಕ ದೊಡ್ಡ ಘಟನೆಗಳು 8 ನೇ ತಾರೀಖಿನಂದು ಅಥವಾ 8 ನೇ ತಾರೀಕಿಗೆ ಸಂಬಂಧಿಸಿದ…

Read More

NDA ಗೆ ಮೋದಿಯೇ ಸಾರಥಿ: ಸಭೆಯಲ್ಲಿ ಮೈತ್ರಿ ಪಕ್ಷದ ನಾಯಕರಾಗಿ ‘ಮೋದಿ’ ಹೆಸರು ಅನುಮೋದನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ ಹಾಗೂ 234 ಕ್ಷೇತ್ರಗಳನ್ನು ಗೆದ್ದ ಇಂಡಿಯಾ ಒಕ್ಕೂಟದ ಮಧ್ಯೆ ಸರ್ಕಾರ ರಚಿಸಲು ಪೈಪೋಟಿ ಶುರುವಾಗಿದೆ. ನಿತೀಶ್‌ ಕುಮಾರ್‌, ಚಂದ್ರಬಾಬು ನಾಯ್ಡು ಸೇರಿ ಹಲವರನ್ನು ಸೆಳೆಯಲು ಇಂಡಿಯಾ ಒಕ್ಕೂಟ ಪ್ರಯತ್ನಿಸುತ್ತಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟದ ಹೈಲೆವೆಲ್‌ ಸಭೆ ನಡೆದಿದೆ. ಇನ್ನು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ, ಎಲ್‌ಜೆಪಿ ಸೇರಿ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ…

Read More

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ದುರ್ಮರಣ

ಡೆಹ್ರಾಡೂನ್‌:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ,…

Read More

ಜೂ.8 ರಂದು 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಜೂನ್ 8 ರಂದು ರಾತ್ರಿ 8 ಗಂಟೆಗೆ 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್‌ಡಿಎ ಮೈತ್ರಿಕೂಟದ…

Read More

NDA ಜೊತೆಗೆ ಇರುತ್ತೇನೆ- ಚಂದ್ರಬಾಬು ನಾಯ್ಡು ಸ್ಪಷ್ಟನೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ರಾಜ್ಯದ ಜನತೆ ನೀಡಿದ ಅಭೂತಪೂರ್ವ ಬೆಂಬಲಕ್ಕಾಗಿ ಜನತೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಧನ್ಯವಾದ ಹೇಳಿದ್ದಾರೆ. ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸೋಷಿಯಲ್ ಮೀಡಿಯಾ ಪೋಸ್ಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಭವಿಷ್ಯಕ್ಕಾಗಿ ತಮ್ಮ ಬದ್ಧತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು…

Read More

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಭರ್ಜರಿ ಗೆಲುವು

ವಾರಾಣಸಿ : ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಮೂರನೇ ಬಾರಿಗೆ ಮೋದಿ ವಾರಾಣಸಿ ಕ್ಷೇತ್ರದಿಂದ ದಿಗ್ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ವಿರುದ್ಧ ಪ್ರಧಾನಿ ಮೋದಿ ಭರ್ಜರಿ ಗೆಲುವು ಕಂಡಿದ್ದಾರೆ. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಮೋದಿ 6,12,970 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 4,60,457 ಮತಗಳನ್ನು ಪಡೆದಿದ್ದಾರೆ.

Read More

5 ಲಕ್ಷ ಮತಗಳಿಂದ ಅಮಿತ್ ಶಾ ಭರ್ಜರಿ ಗೆಲುವು

ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ. ಅಮಿತ್‌ ಶಾ ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Read More

ವಾರಣಾಸಿಯಲ್ಲಿ ಮೋದಿಗೆ ಒಂದು ಲಕ್ಷ ಮತಗಳ ಮುನ್ನಡೆ

ಲಕ್ನೋ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಅವರು ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ಅವರನ್ನು ಹಿಂದಿಕ್ಕಿ ಸುಮಾರು ಒಂದು ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ.

Read More

BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ…

Read More