ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಾಭ ಹೆಚ್ಚಳ: ಶೇ.15 ಲಾಭಾಂಶ ವಿತರಣೆಗೆ ಮಂಡಳಿ ಶಿಫಾರಸು
ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ. ತನ್ನ ಕಳೆದ ಹಣಕಾಸು ವರ್ಷದ ಮತ್ತು ಮಾರ್ಚ್ 31, 2024ಕ್ಕೆ ಅಂತ್ಯಗೊಂಡ 4ನೇ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಯಾದ ತ್ರೈಮಾಸಿಕ ಅವಧಿಯಲ್ಲಿ 6,681 ಕೋಟಿ ರೂ. ಸಾಲವನ್ನು ವಿತರಿಸಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಲ ವಿತರಣೆಯಲ್ಲಿ ಶೇ.11ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಅದೇ ರೀತಿ, 2023-2024ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಒಟ್ಟಾರೆ 23,389 ಕೋಟಿ ರೂ. ಸಾಲ ವಿತರಿಸಿದ್ದು,…

