ಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ
ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಮಂಗಳೂರು ತನ್ನ ಸೂಕ್ಷ್ಮ ಭೌಗೋಳಿಕ ಸ್ಥಾನದಿಂದಾಗಿ, ಮತ್ತು…

