
ಖ್ಯಾತ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು…