ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಜೈಲು ಶಿಕ್ಷೆ..!! ನ್ಯಾಯಾಲಯ ಆದೇಶ
ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ. 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ…

