ಚಿತ್ರದುರ್ಗ ಬಸ್ ದುರಂತ : ಹಾಸನ ಮೂಲದ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ…

Read More

ಭೀಕರ ಸ್ಲೀಪರ್ ಕೋಚ್ ಬಸ್ ದುರಂತ: 11 ಮಂದಿ ಸಜೀವ ದಹನ..!!

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್…

Read More

ಕರ್ನಾಟಕದ ದಾನಿಯಿಂದ ಅಯೋಧ್ಯೆಗೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ ಕೊಡುಗೆ

ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದು, ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ. ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು…

Read More

ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ BPL ಕಾರ್ಡ್ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಮಾತನಾಡಿ, ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ತಹಶೀಲ್ದಾರ್ ಗಳಿಗೆ ಭೇಟಿ ಮಾಡಿ. ಹೊಸದಾಗಿ ಅರ್ಜಿ ಹಾಕಿದರೆ 15 ದಿನಗಳಿಗೆ ಪಡಿತರ ಕಾರ್ಡ್ ನೀಡುತ್ತೇವೆ ಇನ್ನು ಆಸ್ತಿ ಇರುವವರು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವಾಗಿ ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಗೆ ಪಡಿತರ ಅಕ್ಕಿ ಕಳ್ಳ ಸಾಗಾಣಿ ವಿಚಾರವಾಗಿ ಈ…

Read More

ಇನ್ಮುಂದೆ ಸರ್ಕಾರಿ ನೌಕರರು ಜೀನ್ಸ್ ಸ್ಲೀವ್ ಲೆಸ್ ಡ್ರೆಸ್ ಹಾಕುವಂತಿಲ್ಲ: ರಾಜ್ಯ ಸರ್ಕಾರ ಸುತ್ತೋಲೆ

ಇನ್ನು ಮುಂದೆ ಸರಕಾರಿ ನೌಕರರು ಕಚೇರಿಗೆ ಬರುವಾಗ ಟೈಟ್ ಜೀನ್ಸ್, ಹರಿದ ಜೀನ್ಸ್, ಸ್ಲೀವ್ ಲೆಸ್ ಬಟ್ಟೆ ಹಾಕುವಂತಿಲ್ಲ. ಸೂಕ್ತ ಬಟ್ಟೆಗಳನ್ನು ಧರಿಸಿ ಬರಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ ಆಯುಕ್ತರು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು…

Read More

ಹಾಲಿನ ಪ್ರೋತ್ಸಾಹ ಧನ 7 ರೂ. ಹೆಚ್ಚಳ..!

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಒಂದನ್ನು ನೀಡಿದ್ದು ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಬೆಳಗಾವಿ ಅಧಿವೇಶನದಲ್ಲಿ ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದರು. ತಮ್ಮ ಸರ್ಕಾರದ ಹಿಂದಿನ…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ- ತಿನ್ನಲು ಸಂಪೂರ್ಣ ಸುರಕ್ಷಿತ

ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ ಹಲವು ಮೊಟ್ಟೆಗಳನ್ನು…

Read More

ಆದಾಯ ಮಿತಿ ಪರಿಷ್ಕರಣೆಗೆ ಹಿನ್ನೆಲೆ, ಯಾವುದೇ ‘BPL’ ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ

ರಾಜ್ಯ ಸರ್ಕಾರ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್​​ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ಮಿತಿಗೊಳಿಸಿದೆ. ಆದರೆ, ಕೂಲಿ ಕೆಲಸಗಾರರಿಗೂ ನಿತ್ಯ 500 ರೂ. ಕೂಲಿ…

Read More

ಕರ್ನಾಟಕದಲ್ಲೂ 15 ವರ್ಷ ಮೀರಿದ ವಾಹನಗಳು ಗುಜುರಿಗೆ..!ಸರ್ಕಾರದಿಂದ ಅನುಮೋದನೆ

ಬೆಳಗಾವಿ: ರಾಜ್ಯದಲ್ಲಿನ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ ಹಾಗೂ ಸರಕಾರದ ಅಧೀನ ಸಂಸ್ಥೆಗಳಿಗೆ ಸೇರಿದ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಕಡ್ಡಾಯವಾಗಿ ಸ್ಕ್ರ್ಯಾಪ್ ಮಾಡುವುದಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಡಿಸೆಂಬರ್ 17ರಂದು ವಿಧಾನಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೆಪ್ಟೆಂಬರ್ 12ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದರು. ಹದಿನೈದು ವರ್ಷ ಮೀರಿದ ಎಲ್ಲಾ ಸರಕಾರಿ ವಾಹನಗಳನ್ನು…

Read More

ಜಿಪಿಎಸ್ ಟ್ರ್ಯಾಕರ್ ಹೊಂದಿದ ಹಕ್ಕಿ ಪತ್ತೆ..!! ಚೀನಾ ಗೂಢಚರ್ಯೆ ಶಂಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವಲಸಿಗ ಸಿಗಲ್ ಪಕ್ಷಿಯಲ್ಲಿ ಚೀನಾದ ಜಿಪಿಎಸ್ ಟ್ರಾಕರ್ ಪತ್ತೆಯಾಗಿದೆ. ಟ್ರಾಕರ್ ಹೊಂದಿದ ಸಿಗಲ್ ಪಕ್ಷಿಯನ್ನು ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕದಂಬ ನೌಕಾನೆಲ್ಲಿ ಪ್ರದೇಶದಲ್ಲಿ ನಿನ್ನೆ ಸಿಗಲ್ ಹಕ್ಕಿ ಕಾಣಿಸಿಕೊಂಡಿತ್ತು ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಹಕ್ಕಿ ಕಾಣಿಸಿಕೊಂಡಿತು. ಟ್ರ್ಯಾಕರ್ ಹೊಂದಿದೆ ಸೀಗಲ್ ಹಕ್ಕಿ ಕಂಡು ಪೊಲೀಸರು ಆತಂಕಗೊಂಡಿದ್ದಾರೆ ಈ ಟ್ರಾಕ್ಟರ್ ಬಗ್ಗೆ ಕಾರವಾರ ಪೊಲೀಸರು ಸದ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜಿಪಿಎಸ್ ಟ್ರಾಕರ್ ನಲ್ಲಿ…

Read More