7 ಕೋಟಿ ರೂ. ನಗದು ದರೋಡೆ ಪ್ರಕರಣ: 5 ಕೋ.ರೂ ವಶ, ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ವಿಭಾಗದ ಪೊಲೀಸರು, ದರೋಡೆ ಮಾಡಲಾದ 7.11 ಕೋಟಿ ರೂಪಾಯಿಗಳಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳುವ ಮೂಲಕ ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಚೆನ್ನೈ ಮತ್ತು ಆಂಧ್ರಪ್ರದೇಶದಿಂದ ಪೊಲೀಸರು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಮಾಸ್ಟರ್ ಮೈಂಡ್ ಬೆಂಗಳೂರು ನಗರ ಪೂರ್ವ ವಿಭಾಗಕ್ಕೆ ಸೇರಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಕೇರಳದ ನಗದು…

