‘ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲವಾಗಿದೆ’- ಆರ್ ಅಶೋಕ್

ಬೆಂಗಳೂರು, ಮೇ 22: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಸಿದ್ಧರಾಗಬೇಕೆಂದು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿ ಕಾಲಹರಣ ಮಾಡಿದೆ. ಇದೀಗ ರಾಜ್ಯ ಸರ್ಕಾರ…

Read More

ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೆ ಹೊಣೆ : ವಿಜಯೇಂದ್ರ

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ…

Read More

ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಹೊಸ ರೂಲ್ಸ್‌ ನೀಡಿದ ಸಾರಿಗೆ ಸಚಿವಾಲಯ..!

ಭಾರತೀಯ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಇದೀಗ ಡ್ರೈವಿಂಗ್‌ ಲೈಸೆನ್ಸ್‌ ಪಡೆಯೋಕೆ ಹೊಸ ರೂಲ್ಸ್‌ನ್ನ ಅನೌನ್ಸ್‌ ಮಾಡಿದೆ. ಜೂನ್‌ 01, 2024ರಿಂದ ಡ್ರೈವಿಂಗ್‌ ಟೆಸ್ಟ್‌ ನೀಡೋಕೆ ಸವಾರರು ಸರ್ಕಾರಿ RTO ಅಫೀಸ್‌ಗೆ ತೆರಳೋ ಅಗತ್ಯವಿಲ್ಲ. ಬದಲಿಗೆ ಡ್ರೈವಿಂಗ್‌ ತರಬೇತಿ ನೀಡೋ ಸೆಂಟರ್‌ಗಳಲ್ಲೇ ಡ್ರೈವಿಂಗ್‌ ಟೆಸ್ಟ್‌ ನೀಡ್ಬೋದು ಅಂತ ಹೇಳಿದೆ. ಈ ಪ್ರೈವೇಟ್‌ ಸೆಂಟರ್‌ಗಳಿಗೆ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಸರ್ಟಿಫಿಕೇಟ್‌ ಇಶ್ಯು ಮಾಡಲು ಅಧಿಕಾರ ನೀಡಲಾಗುತ್ತೆ. ಆದ್ರಿಂದ ಈ ಪ್ರೈವೇಟ್‌ ಡ್ರೈವಿಂಗ್‌ ಸ್ಕೂಲ್‌ಗಳು ಕೆಲ ಹೊಸ ರೂಲ್ಸ್‌ಗಳನ್ನ…

Read More

ಡಿವೈಎಸ್‌ಪಿ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ದೋಚಿದ ಆನ್‌ಲೈನ್ ಕಳ್ಳರು..!

ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್…

Read More

ವಾಹನ ಸವಾರರಿಗೆ ಗುಡ್‌ ನ್ಯೂಸ್‌ : ʻHSRṔ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೂ ಅವಕಾಶ

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ…

Read More

ಬೆಂಗಳೂರು: ರೇವ್ ಪಾರ್ಟಿ ಪ್ರಕರಣ, ಐವರ ಬಂಧನ-ನಟಿ ಹೇಮಾ ಇದ್ದದ್ದು ನಿಜ- ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು: ನಗರದ ಹೊರವಲಯದ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಹೇಮಾ ಸಹ ಭಾಗಿಯಾಗಿದ್ದರು, ಆದರೆ ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಪಾರ್ಟಿ ನಡೆಯುತ್ತಿರುವುದನ್ನ ತಿಳಿದುಕೊಂಡು ಸಿಸಿಬಿ ಪೊಲೀಸರು, ಸ್ಥಳಿಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಪಾರ್ಟಿಯಲ್ಲಿ…

Read More

 ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ : ಬೆಂಗಳೂರಿನ 4 ಕಡೆ ʻNIAʼ ದಾಳಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ಇಂದು ಬೆಂಗಳುರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಎನ್‌ ಐಎ ಅಧಿಕಾರಿಗಳ ತಂಡವು ಬೆಂಗಳೂರು ಮಾತ್ರವಲ್ಲದೇ ಕೊಯಮತ್ತೂರು ವೈದ್ಯ ಜಾಫರ್‌ ಇಕ್ಬಾಲ್‌ ಮತ್ತು ನಯನ್‌ ಸಾದಿಕ್‌ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್ 13ರಂದು ಮತದಾನ ನಡೆಯಲಿದೆ.ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ವಿಧಾನಸಭೆಯಿಂ ದ ವಿಧಾನಪರಿಷತ್‌ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್,…

Read More

ಸಿಎಂ ಸಿದ್ಧರಾಮಯ್ಯ ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾ?: ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ಮುಖದ ಕಳೆ ನೋಡಿದರೆ ಅವರು ಸರಕಾರದ ಕೊನೆ ಅವಧಿ ಎದುರಿಸುತ್ತಿರುವಂತಿತ್ತು ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಸರಕಾರದ ಒಂದು ವರ್ಷ ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ…

Read More

BREAKING : ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಿಗ್‌ ರಿಲೀಫ್‌ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ʻಜಾಮೀನು ಮಂಜೂರುʼ

ಬೆಂಗಳೂರು : ಹೊಳೆನರಸೀಪರುದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜನಪ್ರತಿನಿಧಿಗಳ ವಿಶೇ಼ಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲಿ ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆದಿದ್ದು, ರೇವಣ್ಣಗೆ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಸಂಬಂಧ ವಿಶೇಷ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು. ಇಂದು ಕೋರ್ಟ್‌ ಷರತ್ತುಬದ್ದ…

Read More