ಕಾಂಗ್ರೆಸ್ ಸರ್ಕಾರದ ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ – ಬಿಜೆಪಿ ಟ್ವೀಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿಕಗಕೆ ಬಂದು ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ‌ ಸರ್ಕಾರ ವರ್ಷಾಚರಣೆಯನ್ನು ಸದ್ಯಕ್ಕೆ ಮುಂದೂಡಿದ್ದರೂ ಕೂಡ ಸುಮ್ಮನಿರದ ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಪಕ್ಷದ ಒಂದ ವರ್ಷದ ಸಾಧನೆ ಬರೀ ಶೂನ್ಯ ಎಂದು ಟೀಕಿಸಿದೆ. ಈ ಸಂಬಂಧ ಸುದ್ದಿಗಳ ಕಟ್ಟಿಂಗ್ಸ್‌ ಜೊತೆಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರವಿರುವ ಅವರ ಫೋಟೋವನ್ನು ಬಿಜೆಪಿ ತನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಜೊತೆಗೆ, ‘ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ…’…

Read More

ವಾಹನ ಸವಾರರೇ ಗಮನಿಸಿ : ʻಮೇ.31 ರೊಳಗೆ ʻHSRPʼ ನಂಬರ್‌ ಪ್ಲೇಟ್‌ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು

ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ…

Read More

ಹೊಸ ಪಡಿತರ ಚೀಟಿ: ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್‌ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.karnic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು* ಪೋಟರ್‌ ಐಡಿ* ಆಧಾರ್‌ ಕಾರ್ಡ್‌* ಇತ್ತೀಚಿನ ಪಾರ್ಸ್‌ ಪೋರ್ಟ್‌* ಮೊಬೈಲ್‌ ಸಂಖ್ಯೆ

Read More

ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಉಚಿತ ತರಬೇತಿಗೆ ಅರ್ಜಿ ಆಹ್ವಾನ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಕುರಿತ 10 ದಿನಗಳ ಉಚಿತ ತರಬೇತಿಯು 27 ಮೇ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು…

Read More

 ಹತ್ಯೆಯಾದ ಅಂಜಲಿ ಸಹೋದರಿ ಯಶೋಧಾ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ – ಕಿಮ್ಸ್‌ನಲ್ಲಿ ಚಿಕಿತ್ಸೆ

ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ. ಅಂಜಲಿ ಸಾವಿನಿಂದ ಕುಗ್ಗಿರುವ ಸಹೋದರಿ ಯಶೋಧಾ ಅಂಬಿಗೇರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ತಂಗಿ ಯಶೋಧಾ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವೀರಾಪುರ ಓಣಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು,ಕಿಮ್ಸ್ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ. ಯಶೋಧಾ ಪ್ರಾಣಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ನಿನ್ನೆ, ಪ್ರತಿಭಟನೆ ವೇಳೆಯೂ ಪ್ರಜ್ಞೆ ತಪ್ಪಿ ಬಿದ್ದಿದ್ದ ಸಹೋದರಿ ಮನೆಗೆ ಹೋದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ….

Read More

BIGG NEWS: ಎವರೆಸ್ಟ್ ಚಿಕನ್ ‘ಮಸಾಲಾ’ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ..!

ಕಾರವಾರ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಕಂಡು ಬಂದಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದ್ದು ಇದು ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಇದರ ಬಳಕೆಯನ್ನು ಕೂಡಲೇ ನಿಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಮನವಿ ಮಾಡಿದ್ದಾರೆ. ಆಹಾರ…

Read More

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ (Bengaluru) ಬರುತ್ತಿದ್ದ ಏರ್ ಇಂಡಿಯಾ ವಿಮಾನ (Air India Flight) ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿಯಿಂದ (New Delhi) ಬೆಂಗಳೂರಿಗೆ ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ವಿಮಾನ ಹೊರಟಿತ್ತು. ವಿಮಾನ ದೆಹಲಿಗೆ…

Read More

ಜೂನ್ 7, 8ರಂದು ಕರ್ನಾಟಕಕ್ಕೆ ಮುಂಗಾರು ಎಂಟ್ರಿ!

– ಮಳೆ ಅಬ್ಬರ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ ಬೆಂಗಳೂರು: ಪೂರ್ವ ಮುಂಗಾರು ಮಳೆಯ ಅಬ್ಬರದ ನಡುವೆ ರಾಜ್ಯಕ್ಕೆ ಗುಡ್‌ನ್ಯೂಸ್ ಸಿಕ್ಕಿದೆ. ಜೂನ್ 7 ಅಥವಾ 8ರಂದು ಮುಂಗಾರು ಮಾರುತಗಳು (Monsoon) ಕರ್ನಾಟಕ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು ನೈಋತ್ಯ ಮುಂಗಾರು ಮಾರುತಗಳು (Southwest Monsoon 2024) ಅಂಡಮಾನ್ ನಿಕೋಬಾರ್ ಮೂಲಕ ಭಾರತವನ್ನು ಪ್ರವೇಶ ಮಾಡಲಿವೆ. ಮೇ 31 ರಂದು ಕೇರಳಕ್ಕೆ ಮಾರುತಗಳು ತಾಕಲಿವೆ. ಜೂನ್ ಮೊದಲ ವಾರದಲ್ಲಿ ಈ ಮಾರುತಗಳು ಕರ್ನಾಟಕವನ್ನು…

Read More

SSLC ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, ಈ ವರ್ಷ ಗ್ರೇಸ್ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು…

Read More

Bengaluru Flood Areas: ಎಚ್ಚರ, ಬೆಂಗಳೂರಿನ ಈ 198 ಪ್ರದೇಶಗಳಲ್ಲಿ ನೆರೆ ಬರುವ ಸಂಭವ!

ಬೆಂಗಳೂರು: ಜೂನ್ ಆರಂಭದಿಂದ ಬೆಂಗಳೂರಲ್ಲಿ ಮುಂಗಾರು (Monson 2024) ಶುರುವಾಗುವ ನಿರೀಕ್ಷೆ ಇದೆ. ಹೀಗಾಗಿ ಬೆಂಗಳೂರಿಗೆ ನೆರೆಯ ಭೀತಿ  (Bengaluru Floods) ಎದುರಾಗಿದೆ. ಈ ಬಾರಿಯೂ ಬಿಬಿಎಂಪಿ ಪ್ರವಾಹ ಉಂಟಾಗಬಹುದಾದ ಜಾಗಗಳ ಗುರುತು ಮಾಡಿದೆ. ಹಾಗಾದ್ರೆ ಬೆಂಗಳೂರಿನ ಎಲ್ಲೆಲ್ಲಿ ನೆರೆ ಭೀತಿ ಇದೆ? ಇದಕ್ಕೆ ಬಿಬಿಎಂಪಿ ತಡೆಗಟ್ಟಿರುವ ಕ್ರಮ ಏನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್​​. ಸದ್ಯ ಬೆಂಗಳೂರಲ್ಲಿ ಪೂರ್ವ ಮುಂಗಾರು ಚುರುಕಾಗಿದೆ. ಜೂನ್ ಆರಂಭದಲ್ಲೇ ಮುಂಗಾರು ಕೂಡ ಪ್ರವೇಶ ಕಾಣುವ ಸಾಧ್ಯತೆ ಇದೆ. ಹೀಗಾಗಿ ಬಿಬಿಎಂಪಿ ಮುಂಗಾರು…

Read More