ಬೆಳ್ತಂಗಡಿ: ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆ!
ಬೆಳ್ತಂಗಡಿ : ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15) ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ. ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ….

