ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್!

ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ಬಸ್ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.

Read More

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು…

Read More

ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಹೈದರ್ ಅಲಿಯನ್ನು ಪೊಲೀಸರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿಯೇ ಅವರು ಸಾವನ್ನಪ್ಪಿದರು. ಘಟನೆ ಬಳಿಕ, ಬೌರಿಂಗ್ ಆಸ್ಪತ್ರೆ ಬಳಿ…

Read More

ಉಡುಪಿ: ಮನೆಗಳ್ಳತನ ಪ್ರಕರಣ ದಂಪತಿ ಬಂಧನ..!

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ.21ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವರಿ 21 ರಂದು ರಾತ್ರಿ 8.00 ಗಂಟೆಗೆ ಆರೋಪಿಗಳಾದ ಕುಂದಾಪುರದ ಗುಜ್ಜಾಡಿ ನಿವಾಸಿಗಳಾದ ನರಸಿಂಹ ಅವರ ಪುತ್ರ ವಿನಾಯಕ್ (41) ಮತ್ತು ವಿನಾಯಕ್ ಅವರ ಪತ್ನಿ ಪ್ರಮೀಳಾ (30) ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಬೆಳಿಗ್ಗೆ 10.15 ರಿಂದ 11.30 ರ ನಡುವೆ ಕಳ್ಳತನ ನಡೆದಿದೆ. ಕುಂದಾಪುರ…

Read More

ಅಡಮಾನ ರಹಿತ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಹೆಚ್ಚಳ

ಹೊಸದಿಲ್ಲಿ: ಹೊಸ ವರ್ಷ 2025ಕ್ಕೆ ರೈತರಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಗುಡ್‌ ನ್ಯೂಸ್‌ ಕೊಟ್ಟಿದ್ದು ಜನವರಿ 1ರಿಂದ ಅಡಮಾನರಹಿತ ಕೃಷಿ ಸಾಲ ಮಿತಿಯನ್ನು 2 ಲಕ್ಷ ರೂ.ಗೆ ಏರಿಕೆ ಮಾಡಿದೆ. ಈ ಹಿಂದೆ ಇದು 1.60 ಲಕ್ಷ ರೂ. ಇತ್ತು. ಇದರಿಂದ ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲವಾಗಲಿದೆ. ಉತ್ಪಾದನ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸುಲಭವಾಗಿ ಸಾಲ ಸೌಲಭ್ಯ ಸಿಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ದೇಶದ ಶೇ.86 ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ…

Read More

ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ನಾಲ್ವರು ಗುತ್ತಿಗೆ ಕಾರ್ಮಿಕರು ಮೃತ್ಯು

ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್‌ ಕಸವನ್ನು ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಬಲಿಯಾದವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ.ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ನಾಲ್ಕನೆಯವರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಮೀಪದ ಭಾರತಪುಳ ನದಿಗೆ…

Read More

ಸ್ಪೇನ್‌ನಲ್ಲಿ ಭೂಕುಸಿತ ದುರಂತ: ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 205ಕ್ಕೆ ಏರಿಕೆ

ಮ್ಯಾಡ್ರಿಡ್: ಸ್ಪೇನ್‌ನಲ್ಲಿ ಭಾರಿ ಮಳೆಯಿಂದಾಗಿ ದಕ್ಷಿಣದ ಪ್ರಾಂತ್ಯಗಳಲ್ಲಿ ಉಂಟಾಗಿರುವ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 205ಕ್ಕೆ ಏರಿಕೆಯಾಗಿದೆ. ಭೂಕುಸಿತ ಹಾಗೂ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ. ಪ್ರವಾಹದಿಂದಾಗಿ ವೆಲೆನ್ಸಿಯಾದಲ್ಲೇ ಬರೋಬ್ಬರಿ 202 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಲ್ಲಿನ ಸುಮಾರು 75,000 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸ್ಥಳೀಯ ನಾಯಕ ಕಾರ್ಲೋಸ್ ಮಜಾನ್ ಮಾಹಿತಿ ನೀಡಿದ್ದಾರೆ.ನೆರೆಯ ಪ್ರಾಂತ್ಯಗಳಲ್ಲಿ ಮೂರು ಸಾವು ಸಂಭವಿಸಿವೆ. ಪ್ರವಾಹದಿಂದಾಗಿ ಮುಳುಗಡೆಯಾಗಿರುವ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಹಿನ್ನೆಲೆ ಸಾವಿನ ಸಂಖ್ಯೆ…

Read More

DCC ಬ್ಯಾಂಕ್ ನಲ್ಲಿ ಖಾಲಿ ಇರುವ 85 ಹುದ್ದೆಗಳ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬ್ಯಾಂಕ್ ನಲ್ಲಿ ಕೆಲಸ ಮಾಡುವ ನಿರೀಕ್ಷೆಯಲ್ಲಿರುವವವರಿಗೆ DCC ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯ ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಇದೆ ರೀತಿಯ ಉದ್ಯೋಗ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ. ಹುದ್ದೆಗಳ ವಿವರ ಹೀಗಿದೆ:…

Read More

ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೆಹಲಿ: ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಮದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ… — Narendra Modi (@narendramodi) November 1, 2024 ಶುಭಾಶಯ…

Read More

ಕಾಸರಗೋಡು ಅಗ್ನಿ ದುರಂತ, ಬೆಂಕಿಯ ಕೆನ್ನಾಲಿಯಲ್ಲಿ ಸಿಲುಕಿದ್ದ ‘ಮಗು’ ವನ್ನು ರಕ್ಷಿಸಿದ ʼದೈವʼ…!!!

ಕಾಸರಗೋಡು: ಕೇರಳ ಕಾಸರಗೋಡಿನ ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವು ದೈವಸ್ಥಾನದಲ್ಲಿ ಸೋಮವಾರ ತಡರಾತ್ರಿ ನಡೆದ ವಾರ್ಷಿಕ ಕಳಿಯಾಟ್ಟಂ ಸಂದರ್ಭದಲ್ಲಿ ಪಟಾಕಿ ಸ್ಪೋಟದಿಂದ ಸಂಭವಿಸಿದ ಭೀಕರ  ದುರಂತದಲ್ಲಿ 150 ಮಂದಿ ಗಂಭೀರ ಗಾಯಗೊಂಡಿದ್ದರೆ ಅದರಲ್ಲಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಮಧ್ಯೆ ದುರಂತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಅನೇಕರು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸಿದ್ದಾರೆ. ಎಲ್ಲಕ್ಕೂ ಮಿಗಿಲಾಗಿ  ‘ದೈವ ನರ್ತಕ’ನೇ ತನ್ನ ಪ್ರಾಣವನ್ನು ಒತ್ತೆ ಇಟ್ಟು ಪುಟ್ಟ ಮಗುವನ್ನು ರಕ್ಷಿಸಿದ್ದ ಘಟನೆ ನಡೆದಿದೆ. ತನನ್ನ ಜೀವಕ್ಕೆ  ಅಪಾಯವಿದ್ದರೂ ಲೆಕ್ಕಿಸದೆ…

Read More