ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!
ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

