
Read Time:1 Minute, 21 Second
ಮಂಗಳೂರು: ಮುಂಗಾರು ಮಳೆ ಮುಗಿದಿದ್ದು, ಇದೀಗ ಹಿಂಗಾರು ಮಳೆ ಕೇರಳಕ್ಕೆ ಎಂಟ್ರಿ ಕೊಟ್ಟಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಅಕ್ಟೋಬರ್ 20 ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ.


ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಅಕ್ಟೋಬರ್ 20 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಸಮುದ್ರ ತೀರದಲ್ಲಿ 35 ರಿಂದ 45 kmph ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

