
ಉತ್ತರಕಾಶಿ : ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆಯಾಗಿದೆ. ಪ್ರವಾಹದ ಭಯಾನಕ ವೀಡಿಯೋ ವೈರಲ್ ಆಗಿದೆ.


ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟದ ನಂತರ ಧರಾಲಿಯಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ.
ಈಗ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೇಘಸ್ಫೋಟ ಘಟನೆಯ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


ಸೇನೆ, ಎಸ್ಡಿಆರ್ಎಫ್, ಎನ್ಡಿಆರ್ಎಫ್, ಜಿಲ್ಲಾಡಳಿತ ಮತ್ತು ಇತರ ಸಂಬಂಧಿತ ತಂಡಗಳು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಮತ್ತು ಪರಿಸ್ಥಿತಿಯ ಬಗ್ಗೆ ನಿಯಮಿತ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಘಟನೆಯಲ್ಲಿ 50-60 ಜನರು ಕಾಣೆಯಾಗಿದ್ದಾರೆ ಎಂಬ ವರದಿಗಳೂ ಇವೆ.

ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಐಟಿಬಿಪಿ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ.