
Read Time:1 Minute, 19 Second
ಬೆಳ್ತಂಗಡಿ: ಉಜಿರೆ-ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.



ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ ತಾಲೂಕಿನ ಉಜಿರೆ-ಸೂರ್ಯ ರಸ್ತೆಯಲ್ಲಿ ಜ.31ರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದು, ರಾಕೇಶ್ ಕುಮಾರ್ ಮಣ್ಣಿನಡಿ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ಅವರನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ .



