ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್‌ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ

0 0
Read Time:1 Minute, 52 Second

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸರಣಿ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂಬ ಶಂಕೆ ಹಿನ್ನೆಲೆ​​​ಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರವು, ಶ್ರೀಸನ್ ಫಾರ್ಮಾ ಮತ್ತು ಕೇಸನ್ಸ್ ಫಾರ್ಮಾ ಪೂರೈಸುವ ಕೆಮ್ಮಿನ ಸಿರಪ್‌ಗಳ ಮಾರಾಟ ಮತ್ತು ಖರೀದಿಯನ್ನು ರಾಜ್ಯದಲ್ಲಿ ನಿಷೇಧಿಸಿದೆ.

ಹೌದು ರಾಜ್ಯ ಪರವಾನಗಿ ಪ್ರಾಧಿಕಾರ ಮತ್ತು ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್‌ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂ ಮೂಲದ ಶ್ರೀಸನ್ ಫಾರ್ಮಾ ತಯಾರಿಸಿದ ‘ಕೋಲ್ಡ್‌ರಿಫ್ ಸಿರಪ್’ ಮತ್ತು ಜೈಪುರದ ಕೇಸನ್ಸ್ ಫಾರ್ಮಾ ತಯಾರಿಸಿದ ‘ಡೆಕ್ಸ್ಟ್ರೋಮೆಥೋರ್ಫಾನ್ ಹೈಡ್ರೋಬ್ರೋಮೈಡ್ ಸಿರಪ್’ಗಳ ಮಾರಾಟ ಮತ್ತು ಖರೀದಿಯನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್‌ಗಳು ರಾಜ್ಯಕ್ಕೆ ಸರಬರಾಜಾಗಿಲ್ಲದಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷಿಸುವಂತೆ ಇಲಾಖೆ ಆದೇಶಿಸಿದೆ. ವಾಸ್ತವವಾಗಿ, ಈ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *