
Read Time:1 Minute, 12 Second
ಮಂಗಳೂರು: Brand Protectors India Pvt. Ltd ನ South India regional head ಸ್ಟೀಫನ್ ರಾಜ್ ರವರ ದೂರಿನ ಪ್ರಕಾರ ಉಳ್ಳಾಲ ಠಾಣಾ ವ್ಯಾಪ್ತಿಯ SPORTS WINNER ಅಂಗಡಿ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋಟ್ಸ್ ಸೆಂಟರ್ ನಲ್ಲಿ COSCO, NIVIA & YONEX ಬ್ರಾಂಡ್ ಎಂದು ಹಾಕಿರುವ ನಕಲಿ ಫುಟ್ ಬಾಲ್‍ಗಳು, ವಾಲಿಬಾಲ್ ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳು ಮಾರಾಟವಾಗುತ್ತಿರುವ ಬಗ್ಗೆ ದೂರು ನೀಡಿದ ಮೇರೆಗೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮತ್ತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 18-8-2025 ರಂದು ಮತ್ತು ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ 19-8-2025 ರಂದು ದಾಳಿ ಮಾಡಿ ಸುಮಾರು 300 ನಕಲಿ ವಾಲಿಬಾಲ್‍ಗಳು, ಫುಟ್ ಬಾಲ್‍ಗಳು ಹಾಗೂ ಬ್ಯಾಡ್ಮಿಂಟನ್ ರಾಕೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

