ಕರ್ನಾಟಕದಲ್ಲಿ ಮತ್ತೆ ಕೋವಿಡ್ ಹಾವಳಿ: ಸೋಂಕಿಗೆ ಮೊದಲ ಬಲಿ

0 0
Read Time:1 Minute, 45 Second

ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ ವೈರಸ್ (Covid-19)​ ಹಾವಳಿ ಆರಂಭವಾಗಿದೆ. ರಾಜ್ಯದಲ್ಲಿಯೂ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಶನಿವಾರ (ಮೇ 24) ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ (Covid in Karnataka). ಕೊರೊನಾ ಸೋಂಕಿಗೆ ಒಳಗಾಗಿದ್ದ ಬೆಂಗಳೂರಿನ 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲೇ ಇದೆ. ಇನ್ನು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರು ಗ್ರಾಮಂತರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ʼʼರಾಜ್ಯದಲ್ಲಿ ಕೋವಿಡ್‌ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರನ್ನು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆʼʼ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್‌ ಗುಂಡೂರಾವ್‌, ʼʼಉಸಿರಾಟ ಸಮಸ್ಯೆ ಇರುವವರು ಆಸ್ಪತ್ರೆಗೆ ಬಂದಾಗ ಅವರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಬೇಕುʼʼ ಎಂದು ಸೂಚಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *