
Read Time:59 Second
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು ಈವರೆಗೂ ಬಸ್ ದರ, ಮೆಟ್ರೋ ದರ ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಮುಂದಾಗಿದೆ.


ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಲಾಗಿದೆ. ಈ ವಿದ್ಯುತ್ ದರ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.

