ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ಬಿ.ವೈ.ವಿಜಯೇಂದ್ರ

0 0
Read Time:1 Minute, 37 Second

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಚಂದ್ರಶೇಖರ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ಮುಂದೆ ಎರಡು ಬೇಡಿಕೆ ಇಡುತ್ತಿದ್ದೇವೆ. ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ಕೊಡಬೇಕು. ಹಗರಣದ ಹೊಣೆಹೊತ್ತು ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ನಮ್ಮ ಈ ಎರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 1 ವಾರದ ಗಡುವು ನೀಡುತ್ತೇವೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಸಚಿವ ನಾಗೇಂದ್ರ ಗಮನಕ್ಕೆ ಬರದೇ ನಿಗಮದಲ್ಲಿ ಅವ್ಯವಹಾರ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರವನ್ನು ಎಟಿಎಂ ರೀತಿ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *