
ನವದೆಹಲಿ: ದೆಹಲಿ ಕಾರು ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency -NIA)ಗೆ ಹಸ್ತಾಂತರಿಸಿದ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.


ದೆಹಲಿಯ ಕೆಂಪುಕೋಟೆ ಸಮೀಪದ ಮೆಟ್ರೋ ರೈಲು ಗೇಟ್ ಬಳಿಯಲ್ಲಿ ಕಾರು ಸ್ಪೋಟಗೊಂಡು 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಘಟನೆ ನಿನ್ನೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಕೇಂದ್ರ ಸರ್ಕಾರವು ರಾಷ್ಟ್ರೀ ತನಿಖಾ ದಳದಿಂದ (NIA) ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ನಿನ್ನೆ ದೆಹಲಿಯ ಕೆಂಪುಕೋಟೆ ಬಳಿಯಲ್ಲಿನ ಮೆಟ್ರೋ ನಿಲ್ದಾಣದ ಗೇಟ್ ಬಳಿಯಲ್ಲೇ ಎರಡು ಕಾರುಗಳು ಸ್ಪೋಟಗೊಂಡಿದ್ದವು. ಈ ಸ್ಪೋಟದಿಂದಾಗಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದರು.

ಈ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಾಹಿತಿ ಪಡೆದಿದ್ದರು. ಅಲ್ಲದೇ ಮೃತರ ಆತ್ಮಕ್ಕೂ ಶಾಂತಿಯನ್ನು ಕೋರಿದ್ದರು. ಈ ಘಟನೆಯ ಕಾರಣ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.

ಇದೀಗ ಕೇಂದ್ರ ಸರ್ಕಾರವು, ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಡೆದಿದ್ದಂತ ಕಾರು ಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ಆದೇಶಿಸಿದೆ.

