
Read Time:54 Second
ಉಡುಪಿ: ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ನವೆಂಬರ್ 11 ರಂದು ಮುಂಜಾನೆ 5 ಗಂಟೆಗೆ ಹಿಟ್ ಆ್ಯಂಡ್ ರನ್ ನಡೆಸಿ ಪರಾರಿಯಾಗಿದ್ದ ಎಂಬ ಆರೋಪದ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.


ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪುವಿನ ಮಿಲಿಟರಿ ಕಾಲೊನಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಮಹಮ್ಮದ್ ಹುಸೇನ್ ಮೃತಪಟ್ಟಿದ್ದ.
ಅಪಘಾತದ ಭೀಕರತೆಗೆ ಸಾಕ್ಷಿಯಾಗಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

