
Read Time:1 Minute, 15 Second
ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.



ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ ಸ್ಥಳದಲ್ಲಿ ಇದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದರು ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

