
Read Time:1 Minute, 11 Second
ಉಡುಪಿ: ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಭಾಗ ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ.


ಉಡುಪಿ ಜಿಲ್ಲೆಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇಗುಲದ ಬಳಿಯಿರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಆಸ್ಪತ್ರೆಯ ಕಟ್ಟಡದ ನವೀಕರಣ ನಡೆಯುತ್ತಿರುವುದರಿಂದ ಆಸ್ಪತ್ರೆಯಲ್ಲಿ ರೋಗಿಗಳು ಇರಲಿಲ್ಲ. ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಟ್ಟಡ ಹೊತ್ತಿ ಉರಿದಿದೆ.

ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.


