
Read Time:1 Minute, 10 Second
ಬಂಟ್ವಾಳ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಧ್ಯಾರ್ಥಿ ಪತ್ತೆಗೆ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಲಾಗಿದೆ.


ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಶೀಘ್ರವಾಗಿ ಪತ್ತೆ ಮಾಡುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರು ಇಂದು ಫರಂಗಿಪೇಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಗೆ ಆಗಮಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಪೊಲೀಸ್ ಇಲಾಖೆಗೆ ಸೋಮವಾರದ ವರೆಗೆ ಬಾಲಕನ ಪತ್ತೆಗೆ ಅವಕಾಶ ನೀಡಿದರು. ಅಲ್ಲದೆ ವಿಧ್ಯಾರ್ಥಿ ಪತ್ತೆಯಾಗದಿದ್ದರೆ ಎಲ್ಲಾ ಶಾಸಕರೊಂದಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.