ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

0 0
Read Time:2 Minute, 33 Second

ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

24 ಗಂಟೆಗಳಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಕಂಬಳಗಳು ವಿನಾ ಕಾರಣ ವಿಳಂಬಗೊಳ್ಳುತ್ತಿವೆ. ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಮಯ ಮಿತಿಯನ್ನು ಎಲ್ಲ ಕಂಬಳಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು ಎಂದು ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್‌ ಶೆಟ್ಟಿ ಹೇಳಿದ್ದಾರೆ.

ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿದ್ದು, ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದಲ್ಲಿ, ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಣಯಿಸಿದೆ. 24 ಗಂಟೆಗಳಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಕಂಬಳಗಳು ವಿನಾ ಕಾರಣ ವಿಳಂಬಗೊಳ್ಳುತ್ತಿವೆ. ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಮಯವನ್ನು ಎಲ್ಲ ಕಂಬಳಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ ಎಂದಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *