
Read Time:1 Minute, 2 Second
ಮಂಗಳೂರು: ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಬಂಧಿತರು. ಆ ಮೂಲಕ ಚೂರಿ ಇರಿತ ಪ್ರಕರಣದಲ್ಲಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ.


ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಂಭ್ರಮಾಚರಣೆ ನಡೆದಿತ್ತು. ಅದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದ್ದರು. ಆದ್ರೆ ಇದೇ ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ರು.