ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ..!

0 0
Read Time:1 Minute, 8 Second

ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದೆ.

ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ” ಹಿಂದೂ ಸಮಾಜ ಪೂಜನೀಯ ಭಾವನೆಯಲ್ಲಿ ಕಾಣುವ ಎಡನೀರು ಸಂಸ್ಥಾನದ ಶ್ರೀಗಳ ವಾಹನವನ್ನು ಅಡ್ಡಗಟ್ಟಿ ದಾಳಿ ಮಾಡಿರುವುದು ಹಿಂದೂ ಸಮಾಜದ ಭಾವನೆಯನ್ನು ಕೆರಳಿಸಿರುವುದಾಗಿದೆ. ಕೇರಳ ರಾಜ್ಯಾದ್ಯಂತ ನಡೆಯುವ ಇಂತಹ ಘಟನೆಗಳು ಕೇರಳದಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *