
Read Time:57 Second
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.


ಉಚಿತ ಸೌರ ವಿದ್ಯುತ್ ಯೋಜನೆ
ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ.

