ಅಂಚೆ ಇಲಾಖೆಯಲ್ಲಿ ಉದ್ಯೋಗ: SSLC ಪಾಸಾದವರು ಅರ್ಜಿ ಸಲ್ಲಿಸಿ

0 0
Read Time:2 Minute, 57 Second

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯಲ್ಲಿ . ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಆಸಕ್ತರಿಗೆ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ

ಉದ್ಯೋಗಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್

ಒಟ್ಟು ಹುದ್ದೆಗಳು: 19

ಮಾಸಿಕ ವೇತನ: ನಿಯಮಾನುಸಾರ

ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ

ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್‌ಲೈನ್)

ವಿದ್ಯಾರ್ಹತೆ

ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ

ಈ ಮೇಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಮಾಸಿಕ ವೇತನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ಆದಲ್ಲಿ ಅವರಿಗೆ ಮಾಸಿಕ ರೂ.19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ಬಿಹಾರ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಆಯ್ಕೆ ಹೇಗೆ ನಡೆಯಲಿದೆ

ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್ ಬಳಿಕ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಳಾಸ

ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್‌ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *