
Read Time:1 Minute, 0 Second
ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ ಸೋಮವಾರ (ಜೂನ್ 17) ಬೆಳಗ್ಗೆ ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿದಂತೆ ನಾಲ್ವರು ನಕ್ಸಲೀಯರು ಹತರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ


ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಅಮೋಲ್ ವಿ ಹೋಂಕಾರ್ ಪಿಟಿಐಗೆ ತಿಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ನಕ್ಸಲ್ ಘಟಕದ ಪ್ರಾಂತೀಯ ಕಮಾಂಡರ್, ಸಹ ಪ್ರಾಂತೀಯ ಕಮಾಂಡರ್ ಸೇರಿದಂತೆ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಅವರಲ್ಲಿದ್ದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

