
Read Time:1 Minute, 0 Second
ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆ.30ರಂದು ಕೆ, ಅಬ್ದುಲ್ ಹಕೀಂ ಕಡಬ ತಾಲೂಕು ಎಂಬವರು ಅವರ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿರುವಾಗ Ibrahim Mitthodi ExMuslim ಎಂಬ Facebook ಖಾತೆಯಲ್ಲಿ ಧರ್ಮ-ಧರ್ಮಗಳ ಮದ್ಯೆ ದ್ವೇಷ ಉಂಟು ಮಾಡುವಂತೆ ಮಾಡಿ ಸಮಾಜದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಚೋದನಾಕಾರಿ ಪೋಸ್ಟ್ ಮಾಡಿರುತ್ತಾರೆ. ಈ ಬಗ್ಗೆ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025 ಕಲಂ: 353 (2), 299 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.