ಕಾರ್ಕಳ: ಬಸ್ – ತುಫಾನ್ ನಡುವೆ ಭೀಕರ ಅಪಘಾತ- ಮೂವರ ಸಾವು, 8 ಮಂದಿ ಗಂಭೀರ

0 0
Read Time:1 Minute, 28 Second

ಕಾರ್ಕಳ: ಮಿಯಾರು ಕಂಬಳಕ್ರಾಸ್ ಬಳಿ ಇಂದು ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.

ಈ ದುರ್ಘಟನೆಯಲ್ಲಿ ತುಫಾನ್‌ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ 8 ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *