
Read Time:57 Second
ಉಪ್ಪಿನಂಗಡಿ: ಐರಾವತ ಬಸ್ ಒಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ


ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಅಲ್ಲಿದ್ದ ಇಸಾಕ್, ಇನ್ಸಾಲ್, ಜಾಯಿ, ಝಕಾರಿಯಾ, ಸಿದ್ದೀಕ್ ಸೇರಿದಂತೆ ಅಟೋ ಚಾಲಕರು ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.