
Read Time:1 Minute, 20 Second
ಬಂಟ್ವಾಳ: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ದಿನಾಂಕ 18-11-2025 ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಕಾಣೆಯಾಗಿದ್ದವು. ಈ ಸಂಬಂಧ ಗಣೇಶ ರೈ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನು ವಿಟ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 169/2025 ರಂತೆ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ತನಿಖೆಯ ವೇಳೆ ಲಭಿಸಿದ ಸುಳಿವುಗಳ ಆಧಾರದಲ್ಲಿ ಜ.8ರಂದು ಪ್ರಕರಣದ ಆರೋಪಿ ಉಳ್ಳಾಲ ನಿವಾಸಿ ಝುಲ್ಫಾನ್ ಮಾಲಿಕ್ (30 ವ) ನನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.



