
Read Time:1 Minute, 27 Second
ಬೆಂಗಳೂರು : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.ಆದರೆ ನಮಗೆ 2 ತಿಂಗಳಿನಿಂದ ಹಣ ಬರ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.
