
ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಜಿಲ್ಲೆಯಲ್ಲಿ 24 ಮರಳು ಬ್ಲಾಕ್ ಗಳನ್ನು ಗುರುತಿಸಿ ಟೆಂಡರ್ ಅಂತಿಮಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.


ದಾವಣಗೆರೆ ಜಿಲ್ಲಾದ್ಯಂತ ಒಟ್ಟು 24 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 4 ಬ್ಲಾಕ್ ಸರ್ಕಾರಿ ಕಾಮಗಾರಿಗಳಿಗೆ, 19 ಬ್ಲಾಕ್ ಗಳು ಸಾರ್ವಜನಿಕ ಉಪಯೋಗಕ್ಕೆ ನಿಗದಿಪಡಿಸಿದ್ದು, ಟೆಂಡರ್ ಅಂತಿಮವಾಗಿದೆ. ಇನ್ನೂ ಒಂದು ಬ್ಲಾಕ್ ಮಾತ್ರ ಬಾಕಿ ಇದೆ. ಟೆಂಡರ್ ದಾರರು ಷರತ್ತುಗಳನ್ವಯ ಮರಳು ಪೂರೈಕೆ ಮಾಡಲಾಗುತ್ತದೆ.

ಹರಿಹರ ತಾಲ್ಲೂಕಿನ ಗೋವಿನಾಳು, ಎಲೆಹೊಳೆ, ಚಿಕ್ಕಬಿದರೆ, ಗುತ್ತೂರು, ಮಳಲಹಳ್ಳಿ ಹಾಗೂ ಬಿಲಾಸನೂರು, ಹೊನ್ನಾಳಿ ತಾಲ್ಲೂಕಿನ ಬುಳ್ಳಾಪುರ, ಚಿಕ್ಕಬಸಾಪುರ, ರಾಂಪುರ, ಬಿಳೆಮಲ್ಲೂರು, ಹಿರೇಬಸೂರು, ಬುಳ್ಳಾಪುರ, ಬೀರಗೊಂಡನಹಳ್ಳಿ ಮತ್ತು ಬಾಗೇವಾಡಿ ವ್ಯಾಪ್ತಿಯಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಗೋವಿನಕೋವಿ, ಮಾರಿಗೊಂಡನಹಳ್ಳಿ, ತಗ್ಗಿಹಳ್ಳಿ ಮತ್ತು ಕೋಟೆಹಾಳ್ನಲ್ಲಿ ಮರಳು ಬ್ಲಾಕ್ ಗುರುತಿಸಲಾಗಿದೆ ಎಂದರು.