ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಗವರ್ನರ್ ಗೆಹ್ಲೋಟ್

0 0
Read Time:1 Minute, 57 Second

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ.

ಮೂಲಗಳ ಪ್ರಕಾರ, ಗೆಹ್ಲೋಟ್ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿರುವ ಈ ಮಸೂದೆಯನ್ನು ಈಗ ರಾಜ್ಯ ಸರ್ಕಾರ, ಅನುಮೋದನೆ ಪಡೆಯಲು ರಾಷ್ಟ್ರಪತಿಗಳಿಗೆ ಫೈಲ್ ಅನ್ನು ಕಳುಹಿಸಲಿದೆ.

ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕಳೆದ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ಉಭಯ ಸದನಗಳಲ್ಲೂ ಮಸೂದೆ ಮಂಡಿಸಿ ಅಂಗೀಕರಿಸಿದೆ. ಅದರ ನಂತರ ಬಿಜೆಪಿ ಮಸೂದೆಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿತ್ತು.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಭಾರತೀಯ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲದ ಕಾರಣ ಮಸೂದೆ ಕಾನೂನುಬಾಹಿರ. ಆಡಳಿತಾರೂಢ ಕಾಂಗ್ರೆಸ್ “ತುಷ್ಟೀಕರಣ ರಾಜಕೀಯ”ದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ.

ಸರ್ಕಾರದ ವಿವಿಧ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆ ನೀಡುವಾಗ ಶೇ. 4 ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತ ಸಮುದಾಯದವರಿಗೆ ಕಲ್ಪಿಸುವ ವಿಧೇಯಕ ಇದಾಗಿದೆ. ಎರಡು ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮೀಸಲಾತಿ ಸಿಗಲಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *