ಮಂಗಳೂರು: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ

0 0
Read Time:5 Minute, 55 Second

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮವು ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು.

ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.  ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕೈಗೊಳ್ಳಲಾಗುತ್ತದೆ. ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು.

ಈ ಸಮಯದ ಬಳಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳನ್ನು ಬಳಸಲು ಸಂಬAಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಧ್ವನಿಯ ಮಟ್ಟವು ಶಬ್ದ ಮಾಲಿನ್ಯ ನಿಯಮಗಳು 2000 ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಬೇಕು.

ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ನಿಷೇದಿತ ಮಾದಕ ವಸ್ತುಗಳ ಸಂಗ್ರಹಣೆ ಮತ್ತು ಸೇವನೆಯನ್ನು ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹೊಸವರ್ಷ ಸಂಭ್ರಮಾಚರಣೆಯ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೆನಗ್ನ ಪ್ರದರ್ಶನಗಳು, ಜೂಜು ಹಾಗೂ ಇತರ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮದ್ಯ ಮಾರಾಟ ಮತ್ತು ವಿತರಣೆಗೆ ಸ್ಥಳೀಯ ಅಬಕಾರಿ ಇಲಾಖೆಯಿಂದ ಅಖಿತ ಅನುಮತಿ ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಅಯೋಜಕರು ಸಂಬOಧಿತ ಇಲಾಖೆಗಳಿಂದ ಪಡೆದ ಲೈಸನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.  ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ಉದ್ಯಾನಗಳು, ಕ್ರೀಡಾಂಗಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನವನ್ನು ಪ್ರದರ್ಶನ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನಗಳನ್ನು, ತುರ್ತು ವೈದ್ಯಕೀಯ ವಾಹನಗಳನ್ನು ಮತ್ತು ಇತರ ಭದ್ರತಾ ಕ್ರಮಗಳನ್ನು ಸಂಯೋಜಿಸಬೇಕು.

ಆಯೋಜಕರು ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಗರುಗಳು ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಹೊಸ ವರ್ಷಾಚರಣೆಯನ್ನು ನಡೆಸುವ ಹೋಟೆಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮದ್ಯ ವಿತರಣೆಯಂತಹ ವ್ಯವಸ್ಥೆಗೊಳಿಸಿದ್ದ ಪಕ್ಷದಲ್ಲಿ 18 ವರ್ಷದ ಕೆಳಗಿನ ಅಪ್ರಾಪ್ತರಿಗೆ ಅಂತಹ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರ್ಬಂಧಿಸುವುದು. ಸOಭ್ರಮಾಚರಣೆಯ ಹೆಸರಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ, ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜಿಸಲಾಗುತ್ತವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ.

ಈ ಕಾರ್ಯಪಡೆಯು ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಡ್ರಿಂಕ್ ಅಂಡ್ ಡ್ರೈವ್ ರೀತಿಯ ಕಾನೂನು ಕ್ರಮ ಕೈಗೊಂಡು ವಾಹನಗಳನ್ನು ಮುಟ್ಟುಗೋಲು ಹಾಕಲಾಗುವುದು.  ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆಯು ಮತ್ತು ಧ್ವನಿಯ ಶಬ್ದರಾಶಿ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಘಟನೆಗಳನ್ನು ತಡೆಹಿಡಿಯಲು ವಿಶೇಷ ತಂಡಗಳು ನಿಯೋಜಿಸಲಾಗುತ್ತವೆ.

ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಮುದ್ರ ಬದಿಗಳಲ್ಲಿ ಮದ್ಯಪಾನ ಸೇವಿಸುವುದು, ಅಶ್ಲೀಲ ವರ್ತನೆಗಳು, ಇತರ ಅಶ್ಲೀಲ ಪ್ರದರ್ಶನಗಳು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. 

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *