
Read Time:47 Second
ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

