ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ: ಕಂಪೌಂಡ್ ಗೋಡೆ ಬಾಲಕಿ  ಕುಸಿದು ಮೃತ್ಯು..! ಗುಡ್ಡೆ ಜರಿದು ಮಹಿಳೆ ಸಾವು

0 0
Read Time:3 Minute, 26 Second

ಉಳ್ಳಾಲ: ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂಜನಾಡಿ ಬಳಿಯ ಮೊಂಟೆಪದವು ಸಮೀಪದ ಕೋಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಮಹಿಳೆ ಮೃತಪಟ್ಟಿದ್ದಾರೆ. ಉಳಿದವರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ

ಕಾನಕೆರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮ ನಯೀಮ(10) ಮೃತಪಟ್ಟ ಬಾಲಕಿ ಎಂದು ತಿಳಿಯಲಾಗಿದೆ.

ಕಾನಕರೆಯ ನೌಶಾದ್ ಅವರ ಮನೆಗೆ ಹಿಂಬದಿ ಗುಡ್ಡೆಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದಿದೆ. ಬಾಲಕಿಯನ್ನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ದುರಂತ ನಡೆದಿದೆ. ಕಾಂತಪ್ಪ ಪೂಜಾರಿ ಕಾಲು ಮುರಿದಿದ್ದು ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಎನ್ ಡಿಆ‌ರ್ ಎಫ್, ಎಸ್‌ ಡಿಆರ್ ಎಫ್ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.

ಉಳ್ಳಾಲ ಬೈಲಿನಲ್ಲೂ ಕೃತಕ ನೆರೆಯಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಮೊಗವೀರ ಸಮುದಾಯದವರು ಬೋಟ್ ಗಳನ್ನ ಬಳಸಿ ಮನೆಯೊಳಗೆ ಸಿಲುಕಿದವರನ್ನ ರಕ್ಷಿಸಿದ್ದಾರೆ. ಉಳ್ಳಾಲಬೈಲಿನಲ್ಲಿ ಕಾಲುವೆಗಳನ್ನು ಒತ್ತುವರಿ ಮಾಡಿದ್ದರಿಂದ ನೀರು ಹರಿಯಲಾಗದೆ ಕೃತಕ ನೆರೆ ಉಂಟಾಗಿದೆ. ತಾಲೂಕು ವ್ಯಾಪ್ತಿಯ ಕುಂಪಲ, ಪಿಲಾರು, ಕಲ್ಲಾಪು, ಧರ್ಮನಗರ, ತಲಪಾಡಿ, ಕಲ್ಕಟ್ಟ ಪ್ರದೇಶಗಳಲ್ಲು ಕೃತಕ ನೆರೆ ಬಂದಿದ್ದು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ನಿರಂತರ ಮಳೆ ಮತ್ತು ಕೃತಕ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರಗೊಂಡಿದೆ. ಕಲ್ಲಾಪುವಿನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲಿನ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮ ಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *