
Read Time:1 Minute, 2 Second
ಪುಣೆ : ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ದುರಂತವೊಂದು ಸಂಭವಿಸಿದ್ದು, ಹೆಲಿಕಾಪ್ಟರ್ ವೊಂದು ಪತನಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.


ಪುಣೆ ಜಿಲ್ಲೆಯ ಬವ್ದಾನ್ ಬಳಿಯ ಅರಣ್ಯ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದು ಸರ್ಕಾರಿ ಹೆಲಿಕಾಪ್ಟರ್ ಅಥವಾ ಖಾಸಗಿ ಹೆಲಿಕಾಪ್ಟರ್ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪುಣೆಯ ಬವ್ಧಾನ್ ಬುದ್ರುಕ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
