
ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.


ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು.
ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿತ್ತು. ಮದರಸ, ಮಸೀದಿಯಲ್ಲಿ ಹಿಂದೂಗಳ ಹತ್ಯೆಗೆ ಪ್ರಚೋದನೆ ಎಂಬ ಹೇಳಿಕೆ ನೀಡಿದ್ದರು. ದ್ವೇಷ ಅಸೂಯೆ ಉಂಟುಮಾಡುವ ಹೇಳಿಕೆ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ರತ್ನಾಕರ್ ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.


