
ಅನ್ಯ ಕೋಮಿನ ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನನ್ನು ಥಳಿಸಿದ ನಡೆಸಿದ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದ ಸಮೀಪ ನಡೆದಿದೆ.


ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್ ಎಂಬ ಯುವಕ ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ವೇಳೆ 20 ಕ್ಕೂ ಹೆಚ್ಚು ಯುವಕರು ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ ನಂದನ್ ನನ್ನು ಥಳಿಸಿದ್ದಾರೆ.
ಘಟನೆಯಲ್ಲಿ ನಂದನ್ ಗೆ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಘಟನೆ ಬಗ್ಗೆ ಎಕ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಅಭದ್ರತೆಯ ಸ್ಥಿತಿಗೆ ತಳ್ಳುತ್ತಿರುವ ಕಾಂಗ್ರೆಸ್ ರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೊಲೀಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಒತ್ತಾಯಿಸುವೆ ಎಂದು ಪೋಸ್ಟ್ ಮಾಡಿದ್ದಾರೆ

ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ನಂದನ್ ಆರೋಗ್ಯ ವಿಚಾರಿಸಿದರು. ನಂದನ್ ಗೆ ಧೈರ್ಯ ಹೇಳಿ, ಸೂಕ್ತ ಕಾನೂನು ಕ್ರಮದ ಭರವಸೆ ನೀಡಿದ್ದಾರೆ.

