ವಾಹನ ಮಾಲೀಕರಿಗೆ ಬಿಗ್ ರಿಲೀಫ್ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು.!

0 0
Read Time:1 Minute, 28 Second

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ.

ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು.

ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು. ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *