ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ-ಸುಪ್ರೀಂ ಮಹತ್ವದ ತೀರ್ಪು

0 0
Read Time:2 Minute, 1 Second

ನವದೆಹಲಿ :  ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.

ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *