ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

0 0
Read Time:1 Minute, 54 Second

ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜತೆಗೆ ಭಾರತ-ರಷ್ಯಾ ಸಂಬಂಧಗಳ ವಿವಿಧ ಅಂಶಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.ಇದಾದ ಬಳಿಕ ಸರ್ವಪಕ್ಷಗಳ ನಿಯೋಗವು ಮೊದಲು ರಷ್ಯಾದ ಫೆಡರೇಶನ್ ಕೌನ್ಸಿಲ್‌ನ ಅಂತಾರಾಷ್ಟ್ರೀಯ ವ್ಯವಹಾರಗಳ ಸಮಿತಿ ಉಪಾಧ್ಯಕ್ಷ ಆಂಡ್ರೆ ಡೆನಿಸೋವ್ ಮತ್ತು ಇತರ ಸೆನೆಟರ್‌ಗಳೊಂದಿಗೆ ಸಭೆ ನಡೆಸುವ ಮೂಲಕ ಭಯೋತ್ಪಾದನೆ ಹಾಗೂ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಜತೆಗೆ, ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ್ದ ಆ ಭೀಕರ ದಾಳಿ ಹಾಗೂ ಅದಕ್ಕೆ ಭಾರತವು ಪಾಕಿಸ್ತಾನಕ್ಕೆ ಯಾವ ರೀತಿ ತಿರುಗೇಟು ಕೊಟ್ಟ ಆಪರೇಷನ್‌ ಸಿಂದೂರ್‌ ಯಶಸ್ವಿನ ಬಗ್ಗೆಯೂ ತಿಳಿಸಿದೆ. ಅಲ್ಲದೆ ಭಯೋತ್ಪಾದನೆ ವಿರುದ್ಧದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಸ್ಪಷ್ಟ ಸಂದೇಶ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *