SSLC ಆದವರಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ- ಮಂಗಳೂರಿನಲ್ಲಿ ಪರೀಕ್ಷೆ 

0 0
Read Time:1 Minute, 35 Second

ಬೆಂಗಳೂರು:ಇಂಡಿಯನ್ ಕೋಸ್ಟ್ ಗಾರ್ಡ್ನಲ್ಲಿ ಗ್ರೂಪ್ ಸಿ ವಿಭಾಗದ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಗ್ರೂಪ್ ಸಿಯ ಒಟ್ಟು 4 ಹುದ್ದೆಗಳಿಗೆ ಅರ್ಜಿ ಆಹ್ವಾನ.

ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಮತ್ತು ಔದ್ಯೋಗಿಕ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: 21,700ರಿಂದ 69,100 ರೂ ಮಾಸಿಕ

ಅರ್ಜಿ ಸಲ್ಲಿಕೆ ವಿಧಾನ: ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿಯನ್ನು ಭರ್ತಿ ಮಾಡಿ, ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅಧ್ಯಕ್ಷರು (ಇಎಫ್ ನೇಮಕಾತಿ ಮಂಡಳಿ), ಕೋಸ್ಟ್ ಗಾರ್ಡ್ ಜಿಲ್ಲಾ ಮುಖ್ಯ ಕಚೇರಿ ನಂ.3, ಅಂಚೆ ಪೆಟ್ಟಿಗೆ ನಂಬರ್- 19, ಪಣಂಬೂರು, ನವ ಮಂಗಳೂರು- 575010

ಈ ಹುದ್ದೆಗಳ ಆಯ್ಕೆಗೆ ಮಂಗಳೂರಿನ ಮುಖ್ಯ ಕಚೇರಿಯಲ್ಲಿಯೇ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಏಪ್ರಿಲ್ 10. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ joinindiancoastguard.cdac.in ಇಲ್ಲಿಗೆ ಭೇಟಿ ನೀಡಬಹುದು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *