
ಬೆಂಗಳೂರು: ರಾಜ್ಯದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.


ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.
ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.


ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ
. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.
Hello,
for your website do be displayed in searches your domain needs to be indexed in the Google Search Index.
To add your domain to Google Search Index now, please visit
https://www.searchregister.info/